ಜಮೀರ್ ಅಹ್ಮದ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಖಾಸಿಂ ಅಲಿ . ಎಚ್ ಒತ್ತಾಯ:

 (ಕೊಪ್ಪಳ): ಕರ್ನಾಟಕ ಸರ್ಕಾರದ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ರಾಜ್ಯದ ಉಪಮುಖ್ಯಮಂತ್ರಿ (DCM) ಸ್ಥಾನವನ್ನು ನೀಡಬೇಕೆಂದು ಕರ್ನಾಟಕ ರಕ್ಷಣಾ ಯುವ ಗಜ ವೇದಿಕೆಯ ರಾಜ್ಯಾಧ್ಯಕ್ಷರಾದ ಖಾಸಿಂ ಅಲಿ . ಎಚ್ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಮೀರ್ ಅಹ್ಮದ್ ಖಾನ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ರಾಜ್ಯದಾದ್ಯಂತ ಎಲ್ಲಾ ವರ್ಗದ, ಬಡ ಹಾಗೂ ಹಿಂದುಳಿದ ಜನರ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರ ನಾಯಕತ್ವ ಮತ್ತು ಜನಪರ ಕೆಲಸಗಳನ್ನು ಗುರುತಿಸಿ, ಅವರಿಗೆ ತಕ್ಷಣವೇ ಉಪಮುಖ್ಯಮಂತ್ರಿ ಹುದ್ದೆಯನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...